Tuesday, 11 March 2014

ಅವರೇ ಯಶಸ್ವಿ ಯಾಗುವವರು

ಇದು (ದೈವಿಕ) ಗ್ರಂಥ ಸಂದೇಹಾತೀತವಿದು. ಭಯಭಕ್ತಿಯುಳ್ಳವರಿಗೆ ಇದು ಮಾರ್ಗದರ್ಶಿ.
ಪರೋಕ್ಷದ ಮೇಲೆ ವಿಶ್ವಾಸವಿರಿಸುವವರಿಗೆ, ನಮಾಝನ್ನು ಸಂಸ್ಥಾಪಿಸುವವರಿಗೆ, ನಾವು ನೀಡಿರುವ ಸಂಪತ್ಸೌಕರ್ಯಗಳಿಂದ ವ್ಯಯಿಸುವವರಿಗೆ.
ನಿಮಗೆ ಅವತೀರ್ಣಗೊಳಿಸಿದ ಗ್ರಂಥದ (ಅರ್ಥಾತ್ ಕುರಾನ್) ಮತ್ತು ನಿಮಗಿಂತ ಮೊದಲು ಅವತೀರ್ಣಗೊಳಿಸಿದ್ದ ಎಲ್ಲಾ ಗ್ರಂಥಗಳ ಮೇಲೆ ವಿಶ್ವಾಸವಿಡುವವರಿಗೆ ಮತ್ತು ಪರಲೋಕದ ಮೇಲೆ ದೃಡ ವಿಶ್ವಾಸವಿಡುವವರಿಗೆ ಇದು ಮಾರ್ಗದರ್ಶಿ).
ಅಂತವರು ತಮ್ಮ ಪ್ರಭುವಿನ ಸನ್ಮಾರ್ಗದಲ್ಲಿದ್ದಾರೆ ಮತ್ತು ಅವರೇ ಯಶಸ್ವಿ ಯಾಗುವವರು.
(ಕುರಾನ್: 2: 2-5)

No comments:

Post a Comment